ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಸೇನಾ ನೇಮಕಾತಿ ರ್ಯಾಲಿ; ಶಿಸ್ತುಬದ್ಧವಾಗಿ ಆಯೋಜಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನ
ಬರುವ ನವೆಂಬರ್ 04 ರಿಂದ 11 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ಶುಕ್ರವಾರ ಬೆಳಿಗ್ಗೆ 11ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ನಲ್ಲಚೇರುವು ಪ್ರದೇಶದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸಬೇಕು. ವಿವಿಧ ಸಮಿತಿಗಳಲ್ಲಿನ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡಬೇಕು. ತಮಗೆ ವಹಿಸಿದ ಕರ್ತವ್ಯವನ್ನು ಅಚ್ಚು