ತೀರ್ಥಹಳ್ಳಿ: ಆರಗ ಗ್ರಾಮದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಶಾಸಕ ಆರಗ ಜ್ಞಾನೇಂದ್ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಜನತಾ ದರ್ಶನ ಕೈಗೊಂಡ ಶಾಸಕರು ಕ್ಷೇತ್ರದ ಸಮಸ್ಯೆ ಆಲಿಸಿದರು. ಹಕ್ಕು ಪತ್ರ, ನಿವೇಶನ, ರಸ್ತೆ ಸೇರಿದಂತೆ ವಿವಿಧ ಸಮಸ್ಯೆ ಗಳ ಬಗ್ಗೆ ಶಾಸಕರಿಗೆ ಸಾರ್ವಜನಿಕರು ಗಮನಕ್ಕೆ ತಂದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಶಾಸಕರು ಪರಿಹಾರ ಒದಗಿಸಿದರು. ಇನ್ನು ಕೆಲ ಸಮಸ್ಯೆ ಗಳನ್ನ ಬಗೆಹರಿಸುವುದಾಗಿ ಭರವಸೆ ನೀಡಿದರು.