ಕಾರವಾರ ತಾಲೂಕಿನ ದೇವಳಮಕ್ಕಿ ಪಂಚಾಯತ್ ವ್ಯಾಪ್ತಿಯ ಶಿರ್ವೆ ಗುಡ್ಡದಲ್ಲಿ ಕಳೆದ ಎರಡು ದಿನಗಳಿಂದ ಶ್ರೀ ಬಸವೇಶ್ವರ ಹಾಗೂ ಶ್ರೀ ಸಿದ್ಧರಾಮೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆದು ಶನಿವಾರ ಸಂಜೆ 7:30ರ ಸುಮಾರು ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಕಾರವಾರ ತಾಲೂಕು ಸೇರಿದಂತೆ ವಿವಿಧ ಪ್ರದೇಶದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸುವ ಮೂಲಕ ಧನ್ಯತೆ ಮೆರೆದಿದ್ದಾರೆ.