ಸಿದ್ಧಾಪುರ: ಅಯ್ಯಪ್ಪಸ್ವಾಮಿ ಜಾತ್ರೆ ವೇಳೆ ನಡೆದ ದುರ್ಘಟನೆಯಲ್ಲಿ ಗಾಯಗೊಂಡವರನ್ನು ಸಿದ್ದಾಪುರ ಆಸ್ಪತ್ರೆಯಲ್ಲಿ ಆರೋಗ್ಯ ವಿಚಾರಿಸಿದ ಶಾಸಕರ ಪುತ್ರ
ಸಿದ್ದಾಪುರ: ಪಟ್ಟಣದ ಬಾಲಿಕೊಪ್ಪದ ಅಯ್ಯಪ್ಪ ಸ್ವಾಮಿ ಜಾತ್ರೆ ಸಂದರ್ಭದಲ್ಲಿ ಮಂಗಳವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಮೃತಪಟ್ಟು, ೮ ಮಂದಿಗೆ ಗಾಯ ಉಂಟಾಗಿದೆ. ಈ ಹಿನ್ನಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಪುತ್ರ ಅಶ್ವಿನ್ ನಾಯ್ಕ ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ನಟ ಶಿವರಾಜಕುಮಾರ ಆರೋಗ್ಯ ವಿಚಾರಿಸಲು ಅಮೇರಿಕಾಕ್ಕೆ ತೆರಳಿರುವುದರಿಂದ ಅವರ ಅನುಪಸ್ಥಿತಿಯಲ್ಲಿ ಪುತ್ರ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಸಿದ್ದಾಪುರ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಮಾತನಾಡಿಸಿ ಧೈರ್ಯ ತುಂಬಿದ್ದಾರೆ.