Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Maharashtra
Bjp
National
Police
Bihar
India
बीजेपी
Accident
Congress
Modi
Delhi
Viral
मारपीट
Crime
आग
Up
मध्यप्रदेश
Bollywood
दिल्ली
Breakingnews
Madhya_pradesh
Cm
Nsui
उत्तरप्रदेश
Pmmodi
Rahulgandhi
Uttarpradesh
mdrafiq790
ಯಾದಗಿರಿ : ವಡಗೇರ ತಾಲೂಕಿನ ಗುರುಸಣಗಿಯಲ್ಲಿ ಭಕ್ತಿಯ ಸಂಭ್ರಮ! ಶ್ರೀ ಗುರು ಸಿದ್ದಲಿಂಗೇಶ್ವರ ಭವ್ಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು
Yadgir, Yadgir
| Sep 12, 2026
MORE NEWS
Yadgir, Yadgir | Sep 12, 2026
ಯಾದಗಿರಿ ಕೆಡಿಪಿ ಸಭೆಯಲ್ಲಿ ಜನರ ಧ್ವನಿಗೆ ಯಾಕೆ ಕಡಿವಾಣ? ಮಾಧ್ಯಮದವರು ಇದ್ದಾರೆ, ಜೋರಾಗಿ ಮಾತನಾಡಬೇಡಿ ಎಂಬ ಸೂಚನೆಗೆ ಸಾರ್ವಜನಿಕರ ಪ್ರಶ್ನೆ ಯಾದಗಿರಿ, ಸೆ.12: ಯಾದಗಿರಿ ಜಿಲ್ಲೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ರೈತರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು ತಮ್ಮ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಮುಂದೆ ಪ್ರಸ್ತಾಪಿಸುತ್ತಿದ್ದ ವೇಳೆ, “ಮಾಧ್ಯಮದವರು ಇದ್ದಾರೆ, ಜೋರಾಗಿ ಮಾತನಾಡಬೇಡಿ” ಎಂಬ ರೀತಿಯ ಸೂಚನೆ ನೀಡಲಾಗಿದೆ ಎನ್ನಲಾಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಜನರು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಮುಕ್ತವಾಗಿ ಹೇಳಿಕೊಳ್ಳುವುದು ತಪ್ಪೇ? ಮಾಧ್ಯಮದವರು ಸಭೆಯಲ್ಲಿ ಉಪಸ್ಥಿತರಿದ್ದಾರೆ ಎಂಬ ಕಾರಣಕ್ಕೆ ತಮ್ಮ ನೋವು ಹಾಗೂ ಸಮಸ್ಯೆಗಳನ್ನು ಜೋರಾಗಿ ಹೇಳಬಾರದೆಯೇ? ಎಂಬ ಪ್ರಶ್ನೆಗಳು ಇದೀಗ ಕೇಳಿಬರುತ್ತಿವೆ. ರೈತರ ಸಮಸ್ಯೆಗಳನ್ನು ಪ್ರಶ್ನಿಸುವುದು, ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತರ ಕೇಳುವುದು ಹಾಗೂ ಜನರ ಪರವಾಗಿ ಸಂಘಟನೆಗಳ ಮುಖಂಡರು ಧ್ವನಿ ಎತ್ತುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಹಜ ಪ್ರಕ್ರಿಯೆಯಾಗಿದೆ. ಕೆಡಿಪಿ ಸಭೆಯ ಉದ್ದೇಶವೇ ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿದೆ. ಸಭೆಯಲ್ಲಿ ಯಾದಗಿರಿ ಹಾಗೂ ಸುರಪುರ ಶಾಸಕರು ಉಪಸ್ಥಿತರಿದ್ದರೂ, ಜನರ ಪರವಾಗಿ ಹೆಚ್ಚಿನ ಧ್ವನಿ ಎತ್ತದೆ ಮೌನವಾಗಿದ್ದರೆಂಬ ಅಭಿಪ್ರಾಯವೂ ಕೆಲವರಿಂದ ವ್ಯಕ್ತವಾಗಿದೆ. ಜನರ ಸಮಸ್ಯೆಗಳನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು ಇಂತಹ ಸಂದರ್ಭಗಳಲ್ಲಿ ಜನರ ಪರವಾಗಿ ಪ್ರಶ್ನೆ ಮಾಡಬೇಕು ಎಂಬ ನಿರೀಕ್ಷೆಯೂ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಕೆಡಿಪಿ ಸಭೆ ಅಧಿಕಾರಿಗಳ ಮುಂದೆ ಜನರ ಸಮಸ್ಯೆಗಳನ್ನು ಮುಚ್ಚಿಡುವ ವೇದಿಕೆಯಾಗದೆ, ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ವೇದಿಕೆಯಾಗಬೇಕು. ಮಾಧ್ಯಮದವರು ಇರಲಿ, ಕ್ಯಾಮೆರಾಗಳು ಇರಲಿ—ಜನರ ಸಮಸ್ಯೆಗಳು ಮುಕ್ತವಾಗಿ ಚರ್ಚೆಯಾಗಬೇಕು ಎಂಬುದು ಸಾರ್ವಜನಿಕರ ಆಶಯವಾಗಿದೆ. ರೈತರ ನೋವು ಆಲಿಸಬೇಕು, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಹಾಗೂ ಜನಪ್ರತಿನಿಧಿಗಳು ಜನರ ಪರವಾಗಿ ಧ್ವನಿ ಎತ್ತಬೇಕು. ಇದು ಯಾವುದೇ ವ್ಯಕ್ತಿಯ ವಿರುದ್ಧದ ವೈಯಕ್ತಿಕ ಟೀಕೆಯಲ್ಲ; ಯಾದಗಿರಿ ಜಿಲ್ಲೆಯ ಜನರ ಸಮಸ್ಯೆಗಳ ಕುರಿತು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಪ್ರಶ್ನೆ. 👉 ಜನರ ಧ್ವನಿಗೆ ಕಡಿವಾಣ ಬೇಡ — ಜನರ ಪ್ರಶ್ನೆಗಳಿಗೆ ಉತ್ತರ ಬೇಕು.
Yadgir, Yadgir | Sep 12, 2026
KSRTC ಬಸ್ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ; ಚಾಲಕ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ ಮೈಸೂರು, ಸೆ.10: ಚಾಲಕನ ಸಮಯಪ್ರಜ್ಞೆಯಿಂದ ಕೆಎಸ್ಆರ್ಟಿಸಿ (KSRTC) ಬಸ್ನಲ್ಲಿದ್ದ ಹತ್ತಾರು ಪ್ರಯಾಣಿಕರು ಭಾರಿ ಅನಾಹುತದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆ.ಆರ್.ನಗರದಿಂದ ರಾವಂದೂರು ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ದಿಢೀರ್ ಕಟ್ ಆಗಿ ಪಲ್ಟಿಯಾದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಗ್ರಾಮದ ಬಳಿ ನಡೆದಿದೆ. ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ದೊಡ್ಡ ಮಟ್ಟದ ಜೀವಹಾನಿ ತಪ್ಪಿದೆ. ಕೆ.ಆರ್.ನಗರದಿಂದ ರಾವಂದೂರಿಗೆ ಹೊರಟಿದ್ದ ಬಸ್ ಚುಂಚನಕಟ್ಟೆ ಗ್ರಾಮದ ಬಳಿ ಚಲಿಸುತ್ತಿದ್ದಾಗ ಏಕಾಏಕಿ ಸ್ಟೇರಿಂಗ್ ಕಟ್ ಆಗಿದೆ. ಈ ತಾಂತ್ರಿಕ ದೋಷವನ್ನು ತಕ್ಷಣವೇ ಗ್ರಹಿಸಿದ ಬಸ್ ಚಾಲಕ ಕನಕರಾಜ್, ಧೃತಿಗೆಡದೆ ತಕ್ಷಣವೇ ಬಸ್ ವೇಗವನ್ನು ತಗ್ಗಿಸಿ (ಸ್ಲೋ ಮಾಡಿ) ರಸ್ತೆ ಪಕ್ಕದ ಗದ್ದೆಗೆ ಇಳಿಸಿದ್ದಾರೆ. ಚಾಲಕನ ಈ ದಿಟ್ಟ ಹಾಗೂ ಸಮಯಪ್ರಜ್ಞೆಯ ನಿರ್ಧಾರದಿಂದಾಗಿ ಬಸ್ ಪಲ್ಟಿಯಾದರೂ ಸಹ ಭಾರಿ ದುರಂತ ತಪ್ಪಿದಂತಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಕೆ.ಆರ್.ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Yadgir, Yadgir | Sep 12, 2026
🚨 ಬಾಲಕಾರ್ಮಿಕರ ವಿರುದ್ಧ ವಿಶೇಷ ಕಾರ್ಯಾಚರಣೆ ಇಂದು ಕೊಡೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜನಕೊಳ್ಳುರು ಗ್ರಾಮದಲ್ಲಿ ಹೋಟೆಲ್ಗಳು, ಟೀ ಅಂಗಡಿಗಳು ಹಾಗೂ ಡಾಬಾಗಳಿಗೆ ಖುದ್ದಾಗಿ ಭೇಟಿ ನೀಡಿ ಬಾಲಕಾರ್ಮಿಕರ ಕುರಿತು ವಿಶೇಷ ಕಾರ್ಯಾಚರಣೆ ಹಾಗೂ ಪರಿಶೀಲನೆ ನಡೆಸಲಾಯಿತು. ಮಕ್ಕಳನ್ನು ದುಡಿಮೆಗೆ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು. 📚 ಮಕ್ಕಳ ಕೈಯಲ್ಲಿ ಕೆಲಸವಲ್ಲ, ಶಿಕ್ಷಣದ ಪುಸ್ತಕವಿರಲಿ. 🤝 ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸೋಣ. #YadgirDistrictPolice #KodekalPolice #ChildLabour #StopChildLabour #ChildProtection #YadgirPolice
Yadgir, Yadgir | Sep 12, 2026
Yadgir news
Yadgir, Yadgir | Sep 12, 2026
ಬಜಾರ್ ವ್ಯಾಪ್ತಿಯಲ್ಲಿ ಕೋಟ್ಯಂತರ ಮೌಲ್ಯದ ಸರ್ಕಾರಿ ಜಮೀನು ಅತಿಕ್ರಮಣ ತೆರವು- ಜಮೀನು ವಶಕ್ಕೆ ಪಡೆದ ಜಿಲ್ಲಾಡಳಿತ ಬಳ್ಳಾರಿ,ಸೆ.12 : ನಗರದ ಕೌಲ್ ಬಜಾರ್ ಸಮೀಪದ ‘ನಲ್ಲಚೆರುವು' ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಹಾಗೂ ನಗರ ಪಾಲಿಕೆ ಅಧಿಕಾರಿಗಳು ಶುಕ್ರವಾರ ಪೊಲೀಸ್ ಬಂದೋಬಸ್ತ್ನಲ್ಲಿ ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ. ಕೌಲ್ ಬಜಾರ್ ವಾರ್ಡ್ ನಂ. 16, ಟಿ.ಎಸ್. ನಂ. 21/1ಎ1 ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಂಡು, ಕೆರೆಯ ಕೊಳಚೆ ನೀರನ್ನು ಮೋಟಾರ್ ಪಂಪ್ಸೆಟ್ ಮೂಲಕ ಹರಿಸಿ ಅತಿಕ್ರಮಣ ಮಾಡಿಕೊಳ್ಳಲಾಗಿತ್ತು. ಈ ಕುರಿತು ಸಾರ್ವಜನಿಕರು ಮತ್ತು ಸ್ಥಳೀಯರಿಂದ ಬಂದ ದೂರುಗಳ ಮೇರೆಗೆ ಎಚ್ಚೆತ್ತ ತಾಲೂಕು ಆಡಳಿತ ಮತ್ತು ಸಂಬAಧಪಟ್ಟ ಇಲಾಖಾಧಿಕಾರಿಗಳು, ಜೆಸಿಬಿ ಯಂತ್ರಗಳೊAದಿಗೆ ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು. ತೆರವುಗೊಳಿಸಿದ ಜಾಗದಲ್ಲಿ ‘ಇದು ಕರ್ನಾಟಕ ಸರ್ಕಾರದ ಸ್ವತ್ತು, ಇದನ್ನು ಅತಿಕ್ರಮಣ ಮಾಡುವುದು ಶಿಕ್ಷಾರ್ಹ ಅಪರಾಧ’ ಎಂಬ ಎಚ್ಚರಿಕೆ ನಾಮಫಲಕವನ್ನು ಅಳವಡಿಸಲಾಯಿತು. ಅಕ್ರಮವಾಗಿ ಅಳವಡಿಸಲಾಗಿದ್ದ ನೀರಾವರಿ ಪೈಪ್ಗಳು ಹಾಗೂ ಮೋಟಾರ್ಗಳನ್ನು ತೆರವುಗೊಳಿಸಿ, ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆಯಲಾಯಿತು. ಅದೇರೀತಿಯಾಗಿ ಸ್ಥಳೀಯ ಕನಕ ದುರ್ಗಮ್ಮ ಗುಡಿಯಿಂದ-ವಾಲ್ಮೀಕಿ ವೃತ್ತಕ್ಕೆ ತೆರಳುವ ಮುಖ್ಯರಸ್ತೆಯ ಪಕ್ಕದಲ್ಲಿದ್ದ್ದ ನಿವೇಶನ ಜಾಗದ ಒತ್ತುವರಿ ತೆರವು ಮಾಡಿದರು. ನಗರದ ವ್ಯಾಪ್ತಿಯಲ್ಲೇ ಬರುವ ಈ ಎರಡೂ ಜಾಗಗಳು ಕೋಟ್ಯಿಂತರ ಮೌಲ್ಯದ್ದಾಗಿವೆ. ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು, ‘ಸರ್ಕಾರಿ ಜಮೀನು, ಕೆರೆ-ಕಟ್ಟೆ ಒತ್ತುವರಿ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ವತ್ತು ಅತಿಕ್ರಮಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ, ಡಿಡಿಎಲ್ಆರ್ ಪ್ರಮೋದ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಸರ್ವೇಯರ್ಗಳು, ಸ್ಥಳೀಯ ಪೋಲಿಸ್ ಠಾಣೆಯ ಸಿಬ್ಬಂದಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು. ---------
Yadgir, Yadgir | Sep 12, 2026
ಯಾದಗಿರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಸಿಗುತ್ತಾ ಬರ ಪರಿಹಾರ? ಸೆ.16ರ ಪಟ್ಟಿಯತ್ತ ಎಲ್ಲರ ಚಿತ್ತ!
Yadgir, Yadgir | Sep 12, 2026
ಗೋಶಾಲೆಯಿಂದಲೇ ಅಕ್ರಮ ಗೋಸಾಗಾಟ: ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಕಲ್ಗುಂಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ತಡೆದ ಸ್ಥಳೀಯರು, ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ವಾಹನದಲ್ಲಿದ್ದ 8 ರಿಂದ 10 ಗೋವುಗಳನ್ನು ರಕ್ಷಿಸಲಾಗಿದ್ದು, ಬಂಧಿತ ಆರೋಪಿಯನ್ನು ಕುಂದಾಪುರ ಮೂಲದ ಇಲಿಯಾಸ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಮತ್ತಿಬ್ಬರು ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ರಕ್ಷಿಸಲಾದ ಗೋವುಗಳನ್ನು ವಧೆ ಮಾಡುವ ಉದ್ದೇಶದಿಂದಲೇ ಸಾಗಿಸಲಾಗುತ್ತಿತ್ತು ಎಂದು ವಶಕ್ಕೆ ಪಡೆದ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಆರೋಪಿ ಇಲಿಯಾಸ್ ನೀಡಿರುವ ಮಾಹಿತಿಯಂತೆ, ಈ ಕೃತ್ಯದಲ್ಲಿ ಕುಂದಾಪುರದ ಹರ್ಷ, ನಯೀಂ, ಮುತ್ತ ಹಾಗೂ ತೀರ್ಥಹಳ್ಳಿಯ ಗಿರೀಶ್ ಎಂಬುವರು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಓಡಾಡುವ ಹಾಗೂ ಮಲಗುವ ದನಗಳಷ್ಟೇ ಅಲ್ಲದೆ, ಸ್ಥಳೀಯ ಗೋಶಾಲೆಗಳಿಂದಲೇ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿ ದೂರು ನೀಡಿದ್ದಾರೆ. ಈ ಆರೋಪದಿಂದಾಗಿ ಪ್ರಕರಣ ಈಗ ಮತ್ತಷ್ಟು ಕುತೂಹಲ ಹಾಗೂ ಗಂಭೀರ ಸ್ವರೂಪ ಪಡೆದುಕೊಂಡಿದೆ. ವಶಪಡಿಸಿಕೊಂಡ ವಾಹನ ಮತ್ತು ಗೋವುಗಳನ್ನು ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಪೊಲೀಸ್ ಠಾಣೆಯ ಎದುರು ಇರಿಸಲಾಗಿದ್ದು, ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Yadgir, Yadgir | Sep 12, 2026