ಉನ್ನತ ಗುಣಮಟ್ಟದ ಚರ್ಮೋತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಲಿಡ್ಕರ್, ಮುಂಬರುವ ದಿನಗಳಲ್ಲಿ ಮಕ್ಕಳಿಗಾಗಿ ಲೆದರ್ ಶೂ ಹಾಗೂ ಬ್ಯಾಗ್ಗಳನ್ನು ಮಾರಾಟ ಮಾಡಲಿದೆ. ಈ ಮೂಲಕ ಲಿಡ್ಕರ್ ಉತ್ಪನ್ನಗಳಲ್ಲಿ ವೈವಿಧ್ಯತೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಡಾ: ವಸುಂಧರಾ.ಕೆ.ಎಂ ಹೇಳಿದರು. ಹೊಸ ವರ್ಷದ ಆರಂಭದ ಹಿನ್ನಲೆಯಲ್ಲಿ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಬಳಿ ಇರುವ ಲಿಡ್ಕರ್ ಭವನಕ್ಕೆ ಸ್ಥಳಾಂತರಗೊಂಡಿರುವ ಲಿಡ್ಕರ್ ಲೆದರ್ ಎಂಪೋರಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.