ಚಾಮರಾಜನಗರ: ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸಲು ಶೀಘ್ರವಾಗಿ ಶಿಫಾರಸ್ಸು ಮಾಡಿ : ನಗರದಲ್ಲಿ ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ಲಿಂಗರಾಜು ಆಗ್ರಹ
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ಲಿಂಗರಾಜು ಮಾತನಾಡಿ ಉಪ್ಪಾರ ಜನಾಂಗವನ್ನು ಎಸ್ಟಿಗೆ ಸೇರಿಸುವ ನಿಟ್ಟಿನಲ್ಲಿ ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಅಲ್ಲದೇ ನಂಜನಗೂಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ್ಪಾರ ಜನಾಂಗವನ್ನು ಎಸ್ಟಿಗೆ ಶಿಫಾರಸು ಮಾಡುವುದಾಗಿ ಭರವಸೆ ನೀಡಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ತುರ್ತಾಗಿ ಶಿಫಾರಸ್ಸು ಮಾಡಬೇಕೆಂದರು