ತೀರ್ಥಹಳ್ಳಿ: ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ತೀರ್ಥಹಳ್ಳಿ ಪಟ್ಟಣದ ಕುಶಾವತಿಯ ಆಂಜನೇಯ ದೇವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಸೋಮವಾರ ಪತ್ತೆಯಾಗಿದೆ.ಆಂಜನೇಯ ದೇವಸ್ಥಾನದ ಸಮೀಪದ ಶೇಡ್ ಪಕ್ಕ ಮಲಗಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಜೇಬಲ್ಲಿ ಇರುವ ಫೋನ್ ನಂಬರ್ ಗಳಿಗೆ ಕರೆ ಹೋಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ತೀರ್ಥಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ