ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಕೆಎಸ್ಸಿಎ ಪದಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ನಡೆಯಿತು. ಕೆಎಸ್ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ. ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್. ಹಿತೇಂದ್ರ ಅವರು ಹಾಗೂ ಕೆಎಸ್ಸಿಎ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.