ಚಾಮರಾಜನಗರ: ನಗರದಲ್ಲಿ ಪೊಲೀಸ್ ಹುತಾತ್ಮ ದಿನ- ನ್ಯಾಯಾಧೀಶರು ಸೇರಿ ಗಣ್ಯರಿಂದ ಗೌರವ ನಮನ
ಚಾಮರಾಜನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನವನ್ನು ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಪ್ರಭಾವತಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಎಡಿಸಿ ಜವರೇಗೌಡ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು. ಮೈದಾನದಲ್ಲಿನ ಸ್ಮಾರಕಕ್ಕೆ ಪುಷ್ಪಗುಚ್ಛ ಇರಿಸುವ ಮೂಲಕ ಪ್ರಾಣತ್ಯಾಗ ಮಾಡಿದ ಪೊಲೀಸರನ್ನು ಸ್ಮರಿಸಲಾಯಿತು. ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಂಘ, ಸಂಸ್ಥೆ ಮುಖಂಡರು, ರೈತ ಮುಖಂಡರು ಪುಷ್ಪ ನಮನ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು.