ಶಿವಮೊಗ್ಗ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಿ ಸಹಕರಿಸಿ, ಶಿವಮೊಗ್ಗದಲ್ಲಿ ಡಿಸಿ ಗುರುದತ್ತ ಹೆಗಡೆ
ರಾಜ್ಯದ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ದಾಖಲೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಾದ್ಯಂತ ಆರಂಭಗೊಳಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯದಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಜನರು ತಮ್ಮ ಮಾಹಿತಿಯನ್ನು ನೀಡಿ, ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸೋಮವಾರ ಸಂಜೆ 5:30 ಕ್ಕೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಂದಾಜು 4.85ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 4 ಲಕ್ಷ ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಂಡು ಶೇ. 80ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.