ಹನೂರು: ಪೊನ್ನಾಚ್ಚಿಯಲ್ಲಿ ನರೇಗಾ ಮುಖೇನಾ ಹೆಚ್ಚಿನ ಉದ್ಯೋಗವನ್ನು ಕಲ್ಪಿಸುವಂತೆ ಪ್ರತಿಭಟನೆ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮುಖೇನಾ ಹೆಚ್ಚಿನ ಜನರಿಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ಪೊನ್ನಾಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಸೋಮವಾರದಂದು ದಿಡೀರ್ ಪ್ರತಿಭಟನೆ ನಡೆಸಿದರು. ಪೊನ್ನಾಚಿ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರ ಗ್ರಾಮ ಪಂಚಾಯತಿಗೆ ಒಳಪಡುವ ಪ್ರದೇಶಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚಿನ ರೀತಿಥಿ ಕೂಲಿ ಕೆಲಸ ನೀಡುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಪೊನ್ನಾಚಿ ಸ್ನೇಹಜೀವಿ ರಾಜ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಕುಟುಂಬಗಳಿಗೆ ಆತ್ಮವಿಶ್ವಾಸ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಿದ್ದರೆ, ಗ್ರಾಮ ಮಟ್ಟದಲ್ಲಿ ಇದು ಸರಿಯಾಗಿ ಪ್ರಚಾರ ಹಮ್ಮಿಕೊಳ್ಳಬೇಕು ಎಂದರು