ಹೊನ್ನಾವರ: ಗೇರುಸೊಪ್ಪಾಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಹೊನ್ನಾವರ : ತಾಲೂಕಿನ ಗೇರುಸೊಪ್ಪ ಬಳಿ ಬೆಂಗಳೂರಿನಿಂದ ಭಟ್ಟಳಕ್ಕೆ ತೆರಳುತ್ತಿದ್ದ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಾಯವಾಗಿತ್ತು. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಪಘಾತ ಪ್ರಕರಣದ ಘಟನಾ ಸ್ಥಳವಾದ ಎನ್.ಹೆಚ್ 69 ಸೂಳೆಮುರ್ಕಿ ಕ್ರಾಸ್, ಗೇರುಸೊಪ್ಪಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಕುಮಾರ್ ಎನ್ ಎಂ ಅವರು ಭಾನುವಾರ ಬೆಳಿಗ್ಗೆ 9.30 ಗಂಟೆ ಸುಮಾರಿಗೆ ಭೇಟಿ ನೀಡಿ, ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ, ಹಾಜರಿದ್ದ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.