ಸಿಂಧನೂರು: ಸಿಂಧನೂರು : ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಕೇಂದ್ರ ಸರಕಾರ ಬದ್ಧ
ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗೆ ಕೇಂದ್ರ ಬಿಜೆಪಿ ಸರಕಾರ ಬದ್ಧವಾಗಿದೆ, ಮಹಾತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಕೇಂದ್ರ ಸರಕಾರ ರೂಪಿಸಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಜವಳಗೇರಾ ಗ್ರಾಮದಲ್ಲಿ ಕೃಷಿ ಸಂಸ್ಕರಣೆ, ರೈತರ ತರಬೇತಿ ಕೇಂದ್ರ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಿನ್ನದ ಗಣಿಯ ಊರುರಾಯಚೂರಿಗೆ ನನ್ನ ಪ್ರಮಾಣಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಅವರು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಇಂತಹ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ಎಂಪಿಲಾಡ್ ನಿಧಿ, ಖಾಸಗಿ ಸಹಭಾಗಿತ್ವ ಹಾಗೂ ರೈತರನ್ನ