ಶಿವಮೊಗ್ಗ: ಪದವೀಧರ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ನಗರದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭಾಗಿ
ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಶಿವಮೊಗ್ಗ ನಗರದ ಬಿ. ಹೆಚ್. ರಸ್ತೆಯಲ್ಲಿ ಇರುವ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯರು , ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿಗಳಾದ ಡಿ ಎಚ್ ಶಂಕರಮೂರ್ತಿಯವರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ರಾಜ್ಯ ಬಿಜೆಪಿ ಕಾರ್ಯದರ್ಶಿವಿಧಾನಪರಿಷತ್ ಶಾಸಕರಾದ ಡಿ ಎಸ್ ಅರುಣ್, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹಾಗೂ ಇನ್ನಿತರ ಪ್ರಮುಖ ಉಪಸ್ಥಿತರಿದ್ದರು.