ಹಾಸನ: ಡಿಸಿ ಕಚೇರಿ ಎದುರು ವಿಶ್ವಕರ್ಮ ಜಯಂತಿ ಮೆರವಣಿಗೆಗೆ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಚಾಲನೆ
Hassan, Hassan | Sep 17, 2025 ಹಾಸನ : ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ಡಿಸಿ ಕಚೇರಿ ಆವರಣದಲ್ಲಿ ಇಂದು ಆಯೋಜಿಸಲಾಗಿದ್ದ ಮೆರವಣಿಗೆಗೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಚಾಲನೆ ನೀಡಿದರು. ಬೆಳ್ಳಿ ರಥದಲ್ಲಿ ಇರಿಸಲಾಗಿದ್ದ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಹಾಸನಾಂಬ ಕಲಾ ಕ್ಷೇತ್ರ ತಲುಪಿತು.ಕಾರ್ಯಕ್ರಮಕ್ಕೂ ಮುನ್ನ ನಗರದ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಹೋಮ ಹವನಗಳು ಜರುಗಿದವು. ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ವಿಶ್ವಕರ್ಮ ವೃತ್ತದ ಪ್ರತಿಮೆಗೆ ಸಮುದಾಯದ ಮುಖಂಡರು ಪುಶೇಷ ಪೂಜೆ ಸಲ್ಲಿಸಿ ಮುಂದುವರೆದ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಗಮನ ಸೆಳೆದವು.