ಬೆಂಗಳೂರು ಉತ್ತರ: 228ನೇ ರಾಯಣ್ಣ ಜಯಂತಿ; ಮೆಜೆಸ್ಟಿಕ್‌ನ ರಾಯಣ್ಣ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯರಿಮದ ಪುಷ್ಪಾರ್ಚನೆ
228ನೇ ಜಯಂತ್ಸೋತ್ಸವದ ಅಂಗವಾಗಿ ಆಗಸ್ಟ್ 15ರಂದು ಮಧ್ಯಾಹ್ನ 1 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮೆಜೆಸ್ಟಿಕ್ ಬಳಿಯಿರುವ ರಾಯಣ್ಣರವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ಗೌರವ ಸಮರ್ಪಣೆ ಸಲ್ಲಿಸಿದರು.ಈ ವೇಳೆ ಮಾಜಿ ಸಚಿವರಾದ ಹೆಚ್.ಎಂ ರೇವಣ್ಣ, ಆಡಳಿತಗಾರರಾದ ತುಷಾರ್ ಗಿರಿ ನಾಥ್, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಪಶ್ಚಿಮ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಜಂಟಿ ಆಯುಕ್ತರಾದ ಸಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.