ಶಿವಮೊಗ್ಗ: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ರಿಬ್ಬನ್ ಪೇಟೆ ಸರ್ಕಾರಿ ಕಾಲೇಜು ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪನ್ ಪೇಟಿಯ ಕಾಲೇಜ್ ಒಂದರಲ್ಲಿ ಓದುತ್ತಿದ್ದ ಯುವಕನುಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲಾಗಿದ್ದಕ್ಕೆ ಬೇಸತ್ತು ಈ ಕೃತ್ಯ ವ್ಯಸಗಿಕೊಂಡ ಬಗ್ಗೆ ಹೇಳಲಾಗುತ್ತಿದೆ. ರಿಬ್ಬನ್ ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎ ಓದುತ್ತಿದ್ದ ವಿದ್ಯಾರ್ಥಿ ಮನುಷ್ ಡಿ ಮೃತ ಯುವಕ ಎಂದು ತಿಳಿದುಬಂದಿದ್ದು ಈತ ಆನಂದಪುರ ಸಮೀಪದ ಆಡೂರು ಗ್ರಾಮದ ನಿವಾಸಿ ಯಾಗಿದ್ದು ಶುಕ್ರವಾರ ಆತನ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಆತನನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ