ಬಾಗಲಕೋಟೆ: ನಗರದಲ್ಲಿ ನಡೆದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವಿನ ಸಭೆ ವಿಫಲ, ರೈತರ ಆಕ್ರೋಶ
ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರ ನಡುವಿನ ಸಂಧಾನ ಸಭೆ ವಿಫಲವಾಗಿದೆ.ಬಾಗಲಕೋಟೆ ನಗರದ ಜಿಲ್ಲಾಡಳಿತಭವನದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವಲ್ಲಿ ಪ್ರಯತ್ನ ವಿಫಲವಾಗಿದೆ.ಡಿಸಿ ಸಂಗಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಅಧಿಕಾರಿಗಳು ಭಾಗಿಯಾಗಿದ್ದರು.ಒಮ್ಮದ ನಿರ್ಧಾರ ವಾಗುವವರೆಗೆ ಸಕ್ಕರೆ ಕಾರ್ಖಾನೆ ಆರಂಭಿಸದಂತೆ ಕಬ್ಬು ಬೆಳೆಗಾರರು ಎಚ್ಚರಿಕೆ ನೀಡಿದ್ದಾರೆ.ಬಾಕಿ ಪಾವತಿ ಹಾಗೂ ಪ್ರಸಕ್ತ ಸಾಲಿಗೆ ಕಬ್ಬಿನ ದರ ನಿಗದಿ ಕುರಿತು ಸಭೆ ಕರೆಯಲಾಗಿತ್ತು.