ಮೊಳಕಾಲ್ಮುರು: ಹಿರೇಕೆರೆಹಳ್ಳಿ ಜಯಂತಿ ನಗರದ ರಸ್ತೆ ಬದಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ:ಹಲವರ ಬಂಧನ
ಮೊಳಕಾಲ್ಮುರು:-ಹಿರೆಕೆರೆಹಳ್ಳಿ ಜಯಂತಿ ನಗರ ರಸ್ತೆ ಬದಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರನ್ನು ಮೊಳಕಾಲ್ಮುರು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ. ಶನಿವಾರದಂದು ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 5 ಜನರನ್ನು ವಶಪಡಿಸಿಕೊಂಡಿದ್ದಾರೆ, ಬಂಧಿತರಿಂದ 4,9010ರೂಪಾಯಿ ಹಣ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶನಿವಾರ ಸಂಜೆ 4:20ಕ್ಕೆ ಪ್ರಕರಣ ಕೂಡ ದಾಖಲಾಗಿದೆ.