ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ, ಅಬ್ದುಲ್ ರೆಹಮಾನ್ ಎಂಬ ವಿದ್ಯಾರ್ಥಿ ತನ್ನ ಐಷಾರಾಮಿ ಕಾರನ್ನು ಅಜಾಗರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ಊಟ ಮಾಡುತ್ತಿದ್ದ ಡೆಲಿವರಿ ಬಾಯ್ ಸಂತೋಷ್ ದೊಡ್ಡಗೌಡರ್ ಎಂಬುವರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಲ್ಲಿ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಚ್ಎಸ್ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ರೆಹಮಾನ್ನನ್ನು ಪೊಲೀಸರು ಬಂಧಿಸಿದ್ದಾರೆ.