ಪಟ್ಟಣದ ಸರ್ಕಾರಿ ನೌಕರರ ಭಾಗದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆಯಿಂದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಾಲ್ಲೂಕು ಆರೋಗ್ಯ ಆಡಳಿತ ಅಧಿಕಾರಿ ಡಾ. ನಟರಾಜ್ ಮಾತನಾಡಿ, ಸರ್ಕಾರದ ಆರೋಗ್ಯ ಇಲಾಖೆಯ ಸಂಬಂಧಪಟ್ಟ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ಬಗ್ಗೆ ಚರ್ಚಿಸಲಾಗುತ್ತಿದೆ ಎಂದರು. ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳು ಈ ಸಭೆಯಲ್ಲಿ ಭಾಗವಹಿಸಿದರು.