ಪ್ಲಾಸ್ಟಿಕ್ ತಯಾರಿಕಾ ಘಟಕದ ಮೇಲೆ ಪುರಸಭೆ ದಾಳಿ - 450 ಕೆಜಿ ಪ್ಲಾಸ್ಟಿಕ್ ವಶ ಶ್ರೀನಿವಾಸಪುರ: ಸರ್ಕಾರ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಸಹ, ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ತಯಾರಿಕೆ ಮತ್ತು ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಪುರಸಭೆ ಅಧಿಕಾರಿಗಳು ಇಂದು ಭರ್ಜರಿ ದಾಳಿ ನಡೆಸಿದ್ದಾರೆ. ಪಟ್ಟಣದ ಇಂದಿರಾ ನಗರದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆ ಹಾಗೂ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಸುಮಾರು 450 ಕೆಜಿಗೂ ಅಧಿಕ ತೂಕದ ನಿಷೇಧಿತ ಪ್ಲಾಸ್ಟಿಕ್ ಕವರ್ಗಳು, ತಟ್ಟೆಗಳು ಹಾಗೂ ಲೋಟಗಳನ್ನು ವಶಪಡಿಸಿಕ