ಶಿರಸಿ: ದೇವನಹಳ್ಳಿ ಗ್ರಾ.ಪಂ ಅಭಿವೃದ್ಧಿಗೆ ಶಾಸಕರಿಂದ ಶ್ರಮ: ಪಟ್ಟಣದ ಪತ್ರಿಕಾ ಭವನದಲ್ಲಿ ಕಾಂಗ್ರೆಸ್ ಘಟಕಾಧ್ಯಕ್ಷ ರಾಮಚಂದ್ರ
ಶಿರಸಿ: ತಾಲೂಕಿನ ದೇವನಳ್ಳಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ಭೀಮಣ್ಣ ನಾಯ್ಕ ಶ್ರಮಿಸುತ್ತಿದ್ದಾರೆ ಎಂದು ದೇವನಳ್ಳಿ ಕಾಂಗ್ರೆಸ್ ಘಟಕಾಧ್ಯಕ್ಷ ರಾಮಚಂದ್ರ ಮರಾಠಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ದೇವನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಅವರ ಜನಪರ ಆಡಲಕಿತ ಸಹಿಸದ ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.ಹೋರಾಟಗಾರ ಅನಂತಮೂರ್ತಿ ಹೆಗಡೆ ಶಾಸಕರನ್ನು ಅನಗತ್ಯವಾಗಿ ಗುರಿ ಮಾಡುತ್ತಿದ್ದಾರೆ. ಅಭಿವೃದ್ಧಿ ಮಾಡುವುದೇ ಅನಂತಮೂರ್ತಿ ಉದ್ದೇಶವಾದರೆ ಶಾಸಕರ ಜತೆ ಹೆಜ್ಜೆ ಹಾಕಲಿ ಎಂದರು