ಶಿವಮೊಗ್ಗ: ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಯುವತಿ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ನಾಪತ್ತೆಯಾಗಿದ್ದಂತಹ ಯುವತಿ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಶನಿವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಾಳೆ. ಜೂನ್ 29 ರಂದು ಧರ್ಮಸ್ಥಳದ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದಂತಹ 24 ವರ್ಷದ ಪೂಜಾ ಕೆಲಸಕ್ಕೆಂದು ಹೋದವಳು ನಾಪತ್ತೆಯಾಗಿದ್ದಳು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಪ್ರಕರಣದ ವಿಚಾರಣೆಯನ್ನು ನಡೆಸಿದ ಆಗುಂಬೆ ಪೊಲೀಸರ ಬಳಿ ಮಣಿಕಂಠ ಎಂಬಾತ ಪೂಜಾಳನ್ನ ಕೊಲೆ ಮಾಡಿ ಅರಣ್ಯ ಪ್ರದೇಶದಲ್ಲಿ ಎಸೆದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಾಜಾರ್ ಮಾಡಿಸಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ