ಶಿವಮೊಗ್ಗ: ಶಿಕಾರಿಪುರದ ಶ್ರೀಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ
ಶುಕ್ರವಾರ ಬೆಳಗ್ಗೆ 11,30ಕ್ಕೆ ಶಿಕಾರಿಪುರದಲ್ಲಿ ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯರು , ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರು ಸ್ಥಳೀಯ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಶಿಕಾರಿಪುರದ ಪುರಾಣ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದ ವತಿಯಿಂದ ಸನ್ಮಾನ ಸ್ವೀಕರಿಸಿದರು ಮತ್ತು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು. ನಂತರ ಅಲ್ಲಿನ ಸ್ಥಳಿಯ ಬಿಜೆಪಿ ಮುಖಂಡರ ಜೊತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಯಕರ್ತರು ಹಾಗೂ ಪ್ರಮುಖ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.