ಶೃಂಗೇರಿ: 37 ಕೋಟಿ 65 ಲಕ್ಷ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ದಿನೇಶ್ ಗುಂಡೂರಾವ್
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಜನರ ಬಹುದಿನದ, ದಶಕದ ಬೇಡಿಕೆಯಾಗಿದ್ದ, 100 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಕನಸು ಇದೀಗ ನನಸಾಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು ಬಳಿಕ ಮಾತನಾಡಿದ ಅವರು 37 ಕೋಟಿ 65 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.