ಮಾದಿಗ ಮೀಸಲಾತಿ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಸಿ. ಮಹಾದೇವಪ್ಪ ಅವರು ಒಳ ಮೀಸಲಾತಿ ಬಿಲ್ ನ್ನು ಪಾಸ್ ಮಾಡಿದ್ದಾರೆ. ಇದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಸ್ವಾಗತಿಸಿ ಬೆಂಬಲಿಸಿದ್ದಾರೆ ಎಂದು ಹೇಳಿದರು ಶುಕ್ರವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. 35 ವರ್ಷಗಳ ಮಾದಿಗ ಮೀಸಲಾತಿ ಹೋರಾಟ ಸಮಿತಿ ಮತ್ತು ಮಾದಿಗ ದಂಡೋರಾ ಹೋರಾಟಕ್ಕೆ ಫಲ ಸಿಕ್ಕಿದೆ ಎಂದು ಹೇಳಿದರು