ಮೈಸೂರು ದಸರಾ ವಸ್ತು ಪ್ರದರ್ಶನಕ್ಕೆ ರಾಜ್ಯ ಸರ್ಕಾರ ಭಾರೀ ಪ್ರಮಾಣದಲ್ಲಿ ಬಿಡುಗಡೆ ಮಾಡಿರುವ ಅನುದಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸಗೌಡ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು ಸರ್ಕಾರದಿಂದ ಬಂದ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ.