ಬೆಂಗಳೂರು ಉತ್ತರ: ಧಾರವಾಡ ಹೈಕೋರ್ಟ್ ಆದೇಶ ಸಂವಿಧಾನವನ್ನು ಎತ್ತಿ ಹಿಡಿದಿದೆ ಮಾಜಿ ಸಿಎಂ ಬೋಮ್ಮಾಯಿ
ಧಾರವಾಡ ಹೈಕೋರ್ಟ್, ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಅನುಮತಿ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಆದೇಶವು ದೇಶದಲ್ಲಿ ಸಂವಿಧಾನ ಇನ್ನೂ ಅಸ್ತಿತ್ವದಲ್ಲಿದೆ ಎಂಬುದನ್ನು ಎತ್ತಿ ಹಿಡಿದಿದೆ ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.