ಕಿತ್ತೂರು: ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅಧಿಕಾರ ಸ್ವೀಕಾರ.
ಎಂ ಕೆ ಹುಬ್ಬಳ್ಳಿ ಗ್ರಾಮದಲ್ಲಿ ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅಧಿಕಾರ ಸ್ವೀಕಾರ. ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಆಯ್ಕೆಯಾಗಿದ್ದು, ಇಬ್ಬರೂ ಗುರುವಾರ ಅಧಿಕಾರ ಸ್ವೀಕರಿಸಿದರು. ಇದಕ್ಕೂ ಮುನ್ನ ಈ ಭಾಗದ ಶಕ್ತಿ ದೇವತೆ ಶ್ರೀ ಬಂಡೆಮ್ಮ ದೇವಿಯ ಹಾಗೂ ವಿಘ್ನ ವಿನಾಶಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಜವಾಬ್ದಾರಿ ವಹಿಸಿಕೊಂಡರು