ಅಫಜಲ್ಪುರ: ನಿವೃತ್ತ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿ ನೀಡಲು ಆಗ್ರಹಿಸಿ ಅಫಜಲಪುರದಲ್ಲಿ ಪ್ರತಿಭಟನೆ
ಕಲಬುರಗಿ : ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಲು ಆಗ್ರಹಿಸಿ ಕಲಬುರಗಿ ಜಿಲ್ಲೆ ಅಫಜಲಪುರ ಪಟ್ಟಣದಲ್ಲಿ ನೂರಾರು ಜನ ಅಂಗನವಾಡಿ ಕಾರ್ಯಕರ್ತೆಯರು ಅಕ್ಟೋಬರ್ 29 ರಂದು ಮಧ್ಯಾನ 2 ಗಂಟೆಗೆ ಪ್ರತಿಭಟನೆ ನಡೆಸಿದರು.. ಅಫಜಲಪುರ ತಾಲೂಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು, 2011 ರಿಂದ 2023 ಮಾರ್ಚ್ ಅವಧಿಯಲ್ಲಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ 1972 ರ ಗ್ರಾಚ್ಯುಟಿ ಹಣವನ್ನ ನೀಡುವಂತೆ ಸಿಡಿಪಿಓ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು