ಯಡ್ರಾಮಿ-ಜೇವರ್ಗಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎ-32 ಎಫ್-1933 ಸಂಖ್ಯೆಯ ಜೇವರ್ಗಿ ಡಿಪೋಗೆ ಸೇರಿದ ಸರ್ಕಾರಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿರುವ ಘಟನೆ ಜೇವರ್ಗಿ ಹೋರವಲಯದಲ್ಲಿ ನಡೆದಿದೆ. ಸ್ಥಳೀಯರ ಮಾಹಿತಿ ಪ್ರಕಾರ ಬ್ರೇಕ್ ಹತ್ತದ ಹಿನ್ನೆಲೆಯಲ್ಲಿ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಬಸ್ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಕೆಲ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪ