ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?" ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, "ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು.