ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ಜಯನಗರದಲ್ಲಿರುವ ಯುನೈಟೆಡ್ ಆಸ್ಪತ್ರೆಯ ಒಂದು ಕೋಟಿ ರೂ.ವರೆಗಿನ ತುರ್ತು ಚಿಕಿತ್ಸೆ ಯೋಜನೆಯನ್ನು ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಉದ್ಘಾಟಿಸಿ ಮಾತನಾಡಿದ ಅವರು, "ನಿಸ್ವಾರ್ಥ ಮನೋಭಾವ ಇರಬೇಕು. ಈ ಕೆಲಸದಲ್ಲಿ ಸಾಕಷ್ಟು ಸವಾಲುಗಳು ಇರುತ್ತವೆ. ಇದನ್ನು ಮೀರಿ ನಡೆಯಬೇಕು. ಈಗ ತಂತ್ರಜ್ಞಾನವೂ ಮುಂದುವರೆದು ನಿಮ್ಮ ನೆರವಿಗಿದೆ. ಇದರಿಂದ ಸಾಕಷ್ಟು ಉಪಯೋಗವಾಗಿದೆ" ಎಂದರು.