ಬೆಳಗಾವಿ: ಬೆಳಗಾವಿ ಧಾರವಾಡ ನಡುವೆ ನೇರ ನೂತನ ರೈಲು ಮಾರ್ಗ ವಿಳಂಬ ವಿಚಾರ:ನಗರದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ
ರಾಜ್ಯ ಸರ್ಕಾರದ ಸಹಕಾರ ಇಲ್ಲದೇ ಬೆಳಗಾವಿ ಧಾರವಾಡ ನೇರ ರೈಲು ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ ಎಂದು ಇಂದು ಸೋಮವಾರ 2 ಗಂಟೆಗೆ ಬೆಳಗಾವಿ ರೈಲು ನಿಲ್ದಾಣದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಮಾತನಾಡಿದರು ಹುಬ್ಬಳ್ಳಿಯಲ್ಲಿ ಇನ್ನೂ 45 ಎಕರೆ ಜಮೀನು ಸ್ವಾಧೀನ ಮಾಡಿಕೊಳ್ಳಬೇಕು ಈಗಾಗಲೇ ಎರಡ್ಮೂರು ಬಾರಿ ನಾನು ಮಾತಾಡಿದ್ದೇನೆ ನಾನು ಎಷ್ಟು ಸಲ ಸಂಪರ್ಕ ಮಾಡಿದ್ರೂ ಸಂತೋಷ ಲಾಡ್ ಸ್ಪಂದನೆ ಮಾಡ್ತಿಲ್ಲ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಅವರು ಕೂಡ ಮಾತಾಡಿದ್ದಾರೆ ಇನ್ನೊಂದು ಬಾರಿ ನಾನೇ ಅವರ ಜೊತೆಗೆ ಮಾತನಾಡುತ್ತೇನೆ ಎಂದರು.