ಮಾಹಿತಿ ಆಯೋಗದಿಂದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆ ಬಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಅಶಿತ್ ಮೋಹನ್ ಪ್ರಸಾದ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ನಡೆದ ಧಾರವಾಡ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.