ಭಟ್ಕಳ: ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ, ಇಬ್ಬರ ಬಂಧನ
ಭಟ್ಕಳ್: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸ್ರಬಂಧಿಸಿದ್ದಾರೆ. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಂಟೈನರ್ನಲ್ಲಿ ತುಂಬಿಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಭಟ್ಕಳ ಪೊಲೀಸರು ಬಂಧಿಸಿ ಅವರಿಂದ ಒಟ್ಟು ₹3,23,000 ಮೌಲ್ಯದ 9,500 ಕೆ.ಜಿ.ಯಷ್ಟು ಅನ್ನಭಾಗ್ಯದ ಅಕ್ಕಿ ಮತ್ತು ಸಾಗಾಟಕ್ಕೆ ಬಳಸಲಾದ ವಾಹನವನ್ನು ವಶಕ್ಕೆ ಪಡೆಡಿದ್ದಾರೆ.