ಕುಂದಗೋಳದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರ ಶಸ್ತ್ರಚಿಕಿತ್ಸೆ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರೇಟರ್ಗೂ ಇಂಧನವಿಲ್ಲದ ಘಟನೆ ಬೆಳಕಿಗೆ ಬಂದಿದೆ. ಈ ಅವ್ಯವಸ್ಥೆಯನ್ನು ಪರಿಶೀಲಿಸಲು ಶಾಸಕ ಎಂ.ಆರ್.ಪಾಟೀಲ್ ದಿಢೀರ್ ಭೇಟಿ ನೀಡಿದರು. ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ವಿದ್ಯುತ್ ಕೈಕೊಟ್ಟಾಗ ಜನರೇಟರ್ ವ್ಯವಸ್ಥೆ ಇದ್ದರೂ, ಅದಕ್ಕೆ ಇಂಧನವಿಲ್ಲದಿರುವುದು ಸೇರಿದಂತೆ ಹಲವು ವಿಚಾರಗಳು ಪ್ರಸ್ತಾಪಗೊಂಡಿದ್ದು, ಆಡಳಿತಾಧಿಕಾರಿಗಳು ಎಚ್ಚರಿಕೆ ವಹಿಸಲು ಶಾಸಕರು ಸೂಚಿಸಿದ್ದಾರೆ.