ಬೀದರ್: ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಶೈಲೇಂದ್ರ ಬೆಲ್ದಾಳೆ ಚಾಲನೆ
Bidar, Bidar | Mar 9, 2024 ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ₹1 ಕೋಟಿ ವೆಚ್ಚದ ಡಾಂಬರೀಕರಣ ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಲಾಯಿತು. ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಗ್ರಾಮದ ಮುಖ್ಯ ರಸ್ತೆಯಿಂದ ಚರ್ಚ್‌ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಉದ್ಘಾಟನೆ ನೆರವೇರಿಸಿದರು. ಈ ವೇಳೆ ಮಾತನಾಡಿ ಕಾಮಗಾರಿಯನ್ನು ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಮಾಡಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರು ಉಪಸ್ಥಿತರಿದ್ದರು.