“ರವಿವಾರ ಸಂಕ್ರಾಂತಿ ಹಬ್ಬದ ಶುಭ ಸಂದರ್ಭದಲ್ಲಿ, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆಪಾಳ್ಯ ವಾರ್ಡ್‌ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಂಕ್ರಾಂತಿ ಸಂಭ್ರಮವನ್ನು ಸಡಗರದಿಂದ ಆಚರಿಸಲಾಯಿತು. ಕ್ಷೇತ್ರದ ಶಾಸಕ ಮುನಿರತ್ನ ಅವರು ಸ್ಥಳೀಯ ಅಕ್ಕ-ತಂಗಿಯರು ಹಾಗೂ ತಾಯಂದಿರಿಗೆ ಸಾಂಪ್ರದಾಯಿಕ ಬಾಗಿನ ವಿತರಣೆ ಮಾಡಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ಕಾರ್ಯಕ್ರಮವು ನಮ್ಮ ಸಂಸ್ಕೃತಿ, ಸಂಪ್ರದಾಯ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಪ್ರತಿಬಿಂಬಿಸಿ, ಮಹಿಳೆಯರಲ್ಲಿ ಸಂತೋಷ ಮತ್ತು ಉತ್ಸಾಹವನ್ನು ಮೂಡಿಸಿತು. ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.”