ಬೆಳಗಾವಿ: ಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕ
ಬೆಳಗಾವಿಯ ಹಿರಿಯ ದಲಿತ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ಮಲ್ಲೇಶ್ ಚೌಗುಲೆ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (KSIIDC) ರಾಜ್ಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ದಶಕಗಳ ಕಾಲದ ಸಾಮಾಜಿಕ ಹಾಗೂ ರಾಜಕೀಯ ಸೇವೆಯನ್ನು ಗುರುತಿಸಿ ಈ ನೇಮಕ ಮಾಡಲಾಗಿದೆ.