ಕೋಲಾರ: ಎಸ್ಟಿಗೆ ಕುರುಬ ಸಮುದಾಯ ಸೇರ್ಪಡೆಗೆ ನಗರದಲ್ಲಿ ವಾಲ್ಮೀಕಿ ಸಂಘದಿಂದ ವಿರೋಧ
Kolar, Kolar | Sep 16, 2025 ರಾಜ್ಯದಲ್ಲಿ ಜಾತಿ ಸಮೀಕ್ಷೆಯಯಲ್ಲಿ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರಿಸಲು ನಡೆಸುತ್ತಿರುವ ಪ್ರಯತ್ನಗಳನ್ನು ಈ ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ನೀಡಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಎನ್ ಅಂಬರೀಷ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯವು ರಾಜ್ಯದಲ್ಲಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ತೀರ ಹಿಂದುಳಿದಿದ್ದು ರಾಜಕೀಯವಾಗಿ ಅಧಿಕಾರಗಳನ್ನು ಪಡೆಯುವುದು ಸಹ ತುಂಬಾ ಕಷ್ಟವಾಗಿದೆ ಇಂತಹ ಸಂದರ್ಭದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗಳಿಗೆ ಸೇರಿಸುವ ಪ್ರಯತ್ನವು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ ಎಂದ್ರು