ರಾಮನಗರ: ಲಕ್ಷ್ಮೀಪುರ ಗ್ರಾಮದಲ್ಲಿ 'ಗ್ರಾಮ ಕಾನೂನು ನೆರವು ಕೇಂದ್ರ' ಆರಂಭ: ಇನ್ಮುಂದೆ ನ್ಯಾಯಾಲಯಕ್ಕೆ ಅಲೆದಾಟವಿಲ್ಲ!
ಲಕ್ಷ್ಮೀಪುರ ಗ್ರಾಮದಲ್ಲಿ ಸಾರ್ವಜನಿಕರಿಗೆ ಕಾನೂನು ನೆರವು ನೀಡುವ ಕೇಂದ್ರ ಲೋಕಾರ್ಪಣೆಗೊಂಡಿದೆ. ಸಣ್ಣಪುಟ್ಟ ವ್ಯಾಜ್ಯಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಈ ಕ್ರಮ ಕೈಗೊಂಡಿದೆ.