ಶಿವಮೊಗ್ಗ: ನಗರದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ರೈತರ ಸಮಸ್ಯೆ ಕುರಿತಾಗಿ ಸಭೆ ನಡೆಸಿದ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್. ಆರ್ ಬಸವರಾಜಪ್ಪ
ಶಿವಮೊಗ್ಗ ನಗರದ ತೋಟಗಾರಿಕೆ ಇಲಾಖೆಯಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಹೆಚ್ಆರ್ ಬಸವರಾಜಪ್ಪ ಅವರ ನೇತೃತ್ವದಲ್ಲಿ ತೋಟಗಾರಿಕೆ ಇಲಾಖೆಯ ಸಂಬಂಧಿಸಿದಂತೆ ಜಿಲ್ಲೆಯ ರೈತರು ವಾಸ್ತವವಾಗಿ ಎದುರಿಸುತ್ತಿರುವ ಬೆಲೆ ವಿಮೆಹಣ,ಸಬ್ಸಿಡಿ ಹಣ, ಇರ್ರಿಗೇಷನ್ ಸೇರಿದಂತೆ ಇನ್ನು ಅನೇಕ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನೇರವಾಗಿ ಚರ್ಚಿಸಿ, ಇರುವಂತಹ ಸಮಸ್ಯೆಗಳನ್ನು ಪರಿಹರಿಸಲು ಸೂಚನೆಯನ್ನು ಬಸವರಾಜಪ್ಪ ಅವರು ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ ಎಂ ಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.