ಹಟ್ಟಿ ಪಟ್ಟಣ ಸೇರಿದಂತೆ ವಿವಿಧೆಡೆ ಇಂದು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯಿತು. ಗೌಡೂರು ಗ್ರಾಮದ ಅಂಗನವಾಡಿ ಕೇಂದ್ರ 1 ರಲ್ಲಿ ಮಾಜಿ ತಾ.ಪಂ ಸದಸ್ಯ ರಾಜಾ ಶೇತುರಾಮ ನಾಯಕ ಜ್ಯೋತಿ ಬೆಳಗಿಸಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಗುಂಟಾ ಪಿ.ಎಚ್.ಸಿ ವೈದ್ಯಾಧಿಕಾರಿ ಡಾ.ವಿಕ್ರಮ್ ಪಾಟೀಲ್ ಪೋಲಿಯೋ ಲಸಿಕಾ ಅಭಿಯಾನ ಉದ್ದೇಶಿಸಿ ಮಾತನಾಡಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಷಕರು ಲಸಿಕೆ ಹಾಕಿಸಬೇಕು .