ಹೊಸಕೋಟೆ ತಾಲೂಕಿನ ಎಂ. ಸತ್ಯ ವಾರ ಗ್ರಾಮದಲ್ಲಿ ಆಹಾರ ಹರಸಿ ಕಾಡಿನಿಂದನಾಡಿಗೆ ಬಂದ ಜಿಂಕೆಯೊಂದು ಪಾಳು ಬಾವಿಗೆ ಬಿದ್ದಿದ್ದು ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕರೆಸಿ, ಜಿಂಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ