ಉಡುಪಿ ನಗರಸಭೆಯ ಅನುದಾನದಲ್ಲಿ ನಿರ್ಮಾಣಗೊಂಡ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಒಣ ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು. ನೂತನ ಮಾರುಕಟ್ನೂತನ ಮಾರುಕಟ್ಟೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹು ವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ ₹10 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದ್ದು, ವಿದ್ಯುತ್ ದೀಪ ಹಾಗೂ ಫ್ಯಾನ್ ಅಳವಡಿಕೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದೆ ಎಂದರು.