ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಮಕ್ಕಳು ತಿಳಿದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ತಿಳಿಸಿದರು. ಧಾರವಾಡದಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ರಾಷ್ಟ್ರೀಯ ದತ್ತು ಮಾಸಾಚರಣೆ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.