ಮೈಸೂರು: ವೃತ್ತಿ ಯಾವುದಾದರೇನು ನಾವೆಲ್ಲರೂ ವಿಶ್ವಕರ್ಮರು ಎಂಬ ಮನೋಭಾವ ಇರಬೇಕು: ನಗರದಲ್ಲಿ ಶಾಸಕರಾದ ತನ್ವೀರ್ ಸೇಠ್
Mysuru, Mysuru | Sep 17, 2025 ನಮ್ಮ ವೃತ್ತಿ ಏನೇ ಇರಬಹುದು ಆದರೆ ನಾವೆಲ್ಲರೂ ವಿಶ್ವಕರ್ಮರು ಎಂಬ ಭಾವ ಎಲ್ಲರಲ್ಲೂ ಇರಬೇಕು ಎಂದು ನರಸಿಂಹರಾಜ ವಿಧಾನಸಬಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಸಹಯೋಗದೊಂದಿಗೆ ನಗರದ ಕರ್ನಾಟಕ ಕಲಾಮಂದಿರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.